ಶನಿವಾರ, ಡಿಸೆಂಬರ್ 11, 2010

ಫೆ.4 ರಿಂದ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

ಬೆಂಗಳೂರು, ಡಿ. 11 : ಕೊನೆಗೂ ಸಾಹಿತ್ಯ ಸಮ್ಮೇಳನಕ್ಕೆ ಮತ್ತೊಂದು ದಿನಾಂಕ ನಿಗದಿಯಾಗಿದೆ. ಫೆ. 4 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ 77ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಲ್ಲೂರು ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಸಲುವಾಗಿ ಡಿ. 24ರಿಂದ ಆರಂಭವಾಗಬೇಕಿದ್ದ ಸಾಹಿತ್ಯ ಸಮ್ಮೇಳನವನ್ನು ಅನಿರ್ದಿಷ್ಟ ಕಾಲದವರಿಗೆ ಮುಂದೂಡಲಾಗಿತ್ತು. ಇದೀಗ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಫೆ. 4ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು.

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವ ಆರ್ ಅಶೋಕ್ ಘೋಷಿಸಿದ್ದರು. ಡಿಸೆಂಬರ್ 24ರಿಂದ ಮೂರು ದಿನಗಳ ಕಾಲ ಬೆಂಗಳೂರು ಸಾಹಿತ್ಯ ಸಮ್ಮೇಳನಕ್ಕೆ ಭರದಿಂದ ಸಿದ್ಧತೆಗಳು ನಡೆದಿದ್ದವು. ಅಷ್ಟರಲ್ಲೇ ದಿಢೀರ್ ಎಂದು ಸಾಹಿತ್ಯ ಸಮ್ಮೇಳನ ಮುಂದೂಡುವ ಘೋಷಣೆ ಹೊರಬಿದ್ದಿತ್ತು.
English summary
Kannada Sahitya Parishat president Dr. Nallur Prasad announced three days All Indian Kannada Meet will starts in Bangalore on Feb.4, 5 and 6. in Bangalore on Saturaday.
ಕೃಪೆ:thatskannada